ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
Update: 2023-01-21 23:38 IST
ಮಂಗಳೂರು: ನಗರದ ಕಂಕನಾಡಿ ಸಮೀಪ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಳ್ಳಾಲದ ನವಾಝ್ (35) ಎಂಬಾತನನ್ನು ಬಂಧಿಸಲಾಗಿದೆ.
ಎಂಟು ವರ್ಷ ಪ್ರಾಯದ ಬಾಲಕಿಗೆ ಗಾರೆ ಕೆಲಸ ಮಾಡುತ್ತಿದ್ದ ನವಾಝ್ ಎಂಬಾತ ಶನಿವಾರ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದ ಸಾರ್ವಜನಿಕರು ಆರೋಪಿಗೆ ಹಲ್ಲೆಗೈದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.