ಉಡುಪಿ | ಏಕರೂಪ ಪಿಂಚಣಿ ವ್ಯವಸ್ಥೆ ಜಾರಿಗೆ ತರುವಂತೆ ಆಗ್ರಹಿಸಿ ಸಿದ್ದರಾಮಯ್ಯರಿಗೆ ಮನವಿ

Update: 2023-01-22 10:44 GMT

ಉಡುಪಿ, ಜ.22: ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ರಾಜ್ಯದಲ್ಲಿ ಏಕರೂಪ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಿವಾರ ಉಡುಪಿಯಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಡುಪಿ ಜಿಲ್ಲಾಧ್ಯಕ್ಷ ರಾಘವ ಶೆಟ್ಟಿ, ಕಾರ್ಯ ದರ್ಶಿ ರಾಮಚಂದ್ರ ವಾಕುಡ ಕೆ., ಉಪಾಧ್ಯಕ್ಷರಾದ ಜೇಮ್ಸ್ ಡಿಸಿಲ್ವ, ಸರಸ್ವತಿ ಬಿ., ಮುಖಂಡರಾದ ರವಿಕುಮಾರ್, ಹರೀಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಭರತ್‌ರಾಜ್ ಶೆಟ್ಟಿ, ಕರುಣಾಕರ್, ರಾಜರಾಮ ಶೆಟ್ಟಿ, ರಾಘವೇಂದ್ರ ಎಂ., ಮಾಲಿನಿ, ಸುಚಿತ್ರಾ ಮೊದಲಾದವರು ಉಪಸ್ಥಿತರಿದ್ದರು.

ಈ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಸರಕಾರಿ ನೌಕಕರು ಹೊಸ ಪಿಂಚಣಿ ಯೋಜನೆ ಬದಲು ಹಳೆ ಪಿಂಚಣಿ ಯೋಜನೆಗೆ ಜಾರಿಗೆ ತರುವಂತೆ ಬೇಡಿಕೆ ಮುಂದಿಟ್ಟಿದ್ದಾರೆ. ಇದನ್ನು ಪ್ರಣಾಳಿಕೆಯಲ್ಲಿ ಸೇರಿಸುವ ಬಗ್ಗೆ ನಾಯಕರಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Similar News