ಮೆಟ್ರೋ ಪಿಲ್ಲರ್ ದುರಂತಕ್ಕೆ ಅಸುರಕ್ಷಿತ ಸ್ಥಿತಿ, ನಿರ್ಲಕ್ಷ್ಯವೇ ಕಾರಣ: ವರದಿ ಸಲ್ಲಿಸಿದ ಐಐಎಸ್‍ಸಿ

ತಾಯಿ, ಮಗು ಸಾವು ಪ್ರಕರಣ

Update: 2023-01-22 12:57 GMT

ಬೆಂಗಳೂರು, ಜ.22: ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿಬಿದ್ದು ತಾಯಿ-ಮಗು ಮೃತಪಟ್ಟ ಪ್ರಕರಣ ಸಂಬಂಧ ಕಬ್ಬಿಣದ ಚೌಕಟ್ಟಿಗೆ ಆಸರೆಯಾಗಿ ಕಟ್ಟಲಾಗಿದ್ದ ಕಬ್ಬಿಣದ ಹಗ್ಗಗಳನ್ನು ತೆರವುಗೊಳಿಸಿದ ಬಳಿಕ ಒಂದು ದಿನ ಪೂರ್ತಿ ಅಸುರಕ್ಷಿತ ಸ್ಥಿತಿಯಲ್ಲೇ ಇರುವುದು ದುರಂತಕ್ಕೆ ಕಾರಣ ಎಂದು ಭಾರತೀಯವಿಜ್ಞಾನ ಸಂಸ್ಥೆ (ಐಐಎಸ್‍ಸಿ) ಉಲ್ಲೇಖಿಸಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಿರುವ ಭಾರತೀಯವಿಜ್ಞಾನ ಸಂಸ್ಥೆ (ಐಐಎಸ್‍ಸಿ), 18 ಮೀಟರ್ ಎತ್ತರದ ಕಂಬಕ್ಕೆ ಯಾವುದೇ ಆಸರೆ ಇಲ್ಲದಿದ್ದರಿಂದ ರಸ್ತೆಗೆವಾಲಿದೆ ಎಂಬುದು ಪರಿಶೀಲನೆ ವೇಳೆ ಗೊತ್ತಾಗಿದೆ.

ಅಲ್ಲದೆ, ಕಂಬ ನಿರ್ಮಾಣ ಮಾಡುವಾಗ ಆಸರೆಗಾಗಿ ಕಬ್ಬಿಣದ ಹಗ್ಗಗಳಿಂದ ಬಿಗಿಯಲಾಗುತ್ತದೆ. ಅದನ್ನು ತೆರವುಗೊಳಿಸಿದ ತಕ್ಷಣ ವೃತ್ತಾಕಾರದ ಕಬ್ಬಿಣದ ಪ್ಲೇಟ್‍ಗಳನ್ನು ಜೋಡಿಸಬೇಕು. ಅಲ್ಲಿಯ ತನಕ ಸುರಕ್ಷತೆ ದೃಷ್ಟಿಯಿಂದ ಕ್ರೇನ್‍ನಿಂದ ಆಸರೆ ನೀಡಬೇಕಿತ್ತು. ಈಗ ಬಿದ್ದಿರುವ ಚೌಕಟ್ಟಿಗೆ ಈ ರೀತಿಯ ಯಾವುದೇ ಆಸರೆ ಇರಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಐಐಎಸ್‍ಸಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ.ಜೆ.ಎಂ. ಚಂದ್ರಕಿಶನ್ ನೇತೃತ್ವದ ತಂಡ 27 ಪುಟಗಳ ವರದಿ ಸಿದ್ಧಪಡಿಸಿದ್ದು, ಇ-ಮೇಲ್ ಮೂಲಕ ವರದಿಯನ್ನು ಬಿಎಂಆರ್‍ಸಿಎಲ್‍ಗೆ ಸಲ್ಲಿಸಿದೆ. 

Similar News