ಬೆಂಗಳೂರು: ಪತ್ನಿಯನ್ನು ಕೊಲೆಗೈದು ವಿಮಾನದಲ್ಲಿ ಪರಾರಿಯಾಗಿದ್ದ ಆರೋಪಿಯ ಬಂಧನ

Update: 2023-01-22 13:59 GMT

ಬೆಂಗಳೂರು, ಜ.22: ಪತ್ನಿಯನ್ನು ಕೊಲೆ ಮಾಡಿ ತಕ್ಷಣವೇ ವಿಮಾನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸದ್ದುಗುಂಟೆ ಠಾಣಾ  ಪೊಲೀಸರು ಯಶಸ್ವಿಯಾಗಿದ್ದಾರೆ.

ಪತ್ನಿ ನಾಝ್ ಅನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಸಿರ್ ಹುಸೇನ್‍ಎಂಬಾತ ಬಂಧಿತ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಮಾಡುವ ಮೊದಲೇ ನಾಸಿರ್ ಹೊಸದಿಲ್ಲಿಗೆ ವಿಮಾನ ಟಿಕೆಟ್ ಬುಕ್‍ಮಾಡಿದ್ದ. ನಂತರ ಕೊಲೆ ಮಾಡಿ ಟ್ಯಾಕ್ಸಿ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ನಂತರ ಟ್ಯಾಕ್ಸಿ ಚಾಲಕನಿಗೆ 4 ಸಾವಿರ ರೂ. ಹಣ  ಫೋನ್ ಪೇಮಾಡಿ 3500ರೂ. ಹಣ ನಗದು ರೂಪದಲ್ಲಿ ಮರಳಿ ಪಡೆದುಕೊಂಡಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.

ಇನ್ನೂ, ಹೊಸದಿಲ್ಲಿಗೆ ವಿಮಾನ ಟೇಕ್ ಆಫ್‍ಆಗುತ್ತಿದ್ದಂತೆ ಆಕೆಯ ಸಹೋದರನಿಗೆ ಮೆಸೇಜ್ ಮಾಡಿ ಮನೆಗೆ ಹೋಗಿ ಮೃತದೇಹವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಸುದ್ದಗುಂಟೆಪಾಳ್ಯ ಪೊಲೀಸರು ಮೊಬೈಲ್ ಜಾಡು ಹಿಡಿದು ಹೊಸದಿಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Similar News