ಜಪಾನ್: ಬೆಂಕಿ ದುರಂತದಲ್ಲಿ 4 ಮಂದಿ ಮೃತ್ಯು

Update: 2023-01-22 15:54 GMT

ಟೋಕಿಯೊ, ಜ.22: ಪಶ್ಚಿಮ ಜಪಾನ್ ನ ಕೊಬೆ ನಗರದ ಬಹುಮಹಡಿ ಕಟ್ಟಡದಲ್ಲಿ ರವಿವಾರ ಸಂಭವಿಸಿದ ಅಗ್ನಿ ಅನಾಹುತದಲ್ಲಿ 4 ಮಂದಿ ಮೃತಪಟ್ಟಿದ್ದು ಇತರ 4 ಮಂದಿ ಗಂಭೀರ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

3 ಮಹಡಿಯ ಕಟ್ಟಡದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 1:30 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು ಮಾಹಿತಿ ತಿಳಿದೊಡನೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಹತೋಟಿಗೆ ತಂದಿದೆ. ಬಳಿಕ ಕಟ್ಟಡದೊಳಗೆ 4 ಮೃತದೇಹಗಳು ಪತ್ತೆಯಾಗಿವೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ 4 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಸತೊಷಿ ಸುಮಿತನಿ ಹೇಳಿದ್ದಾರೆ.

Similar News