ಚಾಮರಾಜಪೇಟೆ ಆಟದ ಮೈದಾನದಲ್ಲಿ ಜ.26ರಂದು ಧ್ವಜಾರೋಹಣಕ್ಕೆ ಸರಕಾರ ಅನುಮತಿ

Update: 2023-01-22 19:41 GMT

ಬೆಂಗಳೂರು, ಜ.22: ಇಲ್ಲಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಜ.26ಕ್ಕೆ ಧ್ವಜಾರೋಹಣ ನೆರವೇರಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ.

ಜ.26ಕ್ಕೆ ಗಣರಾಜ್ಯೋತ್ಸವವನ್ನು ಆಚರಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಸಮಾಲೋಚನೆ ನಡೆಸಿ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಮಾಹಿತಿ ನೀಡಿದ್ದಾರೆ.

ರಾಜ್ಯ ಸರಕಾರದ ವತಿಯಿಂದಲೇ ಕಾರ್ಯಕ್ರಮ ನಡೆಯಲಿದ್ದು, ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಆಟದ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಎರಡು ಸಂಘಟನೆಗಳು ಮನವಿ ಸಲ್ಲಿಸಿದ್ದವು. ಈ ಸಂಬಂಧ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Similar News