ಬೆಂಗಳೂರು: ಬಾಲಕಿಯರ ಶೌಚಾಲಯಕ್ಕೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಸೆರೆ

Update: 2023-01-23 12:24 GMT

ಬೆಂಗಳೂರು, ಜ. 23: ಬೆಂಗಳೂರಿನ  ಜಯನಗರದ ವಿಜಯ ಕಾಲೇಜಿನಲ್ಲಿ ಬಾಲಕಿಯರ ಶೌಚಾಲಯಕ್ಕೆ ನುಗ್ಗಿದ ಯುವಕನೊಬ್ಬನನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಅಜಯ್ ಕುಮಾರ್ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ಜ.10ರ ಬೆಳಗ್ಗೆ 8ರ ವೇಳೆ ವಿಜಯ ಕಾಲೇಜಿನಲ್ಲಿ ಬಾಲಕಿಯರ ಶೌಚಾಲಯಕ್ಕೆ ಯುವಕನೊಬ್ಬ ನುಗ್ಗಿ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ. ತಕ್ಷಣ ವಿದ್ಯಾರ್ಥಿನಿ ಕಿರುಚಲು ಶುರು ಮಾಡಿದಾಗ ಗಾಬರಿಯಿಂದ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. 

ಈ ಘಟನೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಹೆದರಿದ ಕಾಲೇಜಿನ ಆಡಳಿತ ಮಂಡಳಿ ಜಯನಗರ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಇದೀಗ ಆರೋಪಿ ಅಜಯ್ ಕುಮಾರ್‍ನನ್ನು ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

ಇದನ್ನೂ ಓದಿ ಲಂಡನ್:‌ ಪದವಿ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ಧ್ವಜ ಅರಳಿಸಿದ ಭಾರತೀಯ ವಿದ್ಯಾರ್ಥಿ; ವಿಡಿಯೋ ವೈರಲ್

Similar News