ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ನಾನೇ ಅಭ್ಯರ್ಥಿ: ಭವಾನಿ ರೇವಣ್ಣ
Update: 2023-01-24 18:05 IST
ಹಾಸನ: 'ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ನಾನೇ' ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಹೇಳಿದ್ದಾರೆ.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ಕಕ್ಕೇಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, 'ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ' ಎಂದಿದ್ದಾರೆ.
'ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ. ಮತ್ತೊಮ್ಮೆ ಈ ಊರಿಗೆ ಬರುವೆ, ನಿಮ್ಮನ್ನು ಮತ್ತೆ ಭೇಟಿ ಮಾಡುವೆ' ಎಂದು ತಮ್ಮ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.