×
Ad

ಮಂಡ್ಯ | ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ: ಇಬ್ಬರು ಮಹಿಳೆಯರು ಮೃತ್ಯು

Update: 2023-01-25 11:36 IST

ಮಂಡ್ಯ, ಜ.25: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿರುವುದು ವರದಿಯಾಗಿದೆ.

ತಾಲೂಕಿನ ಬಸರಾಳು ಸಮೀಪದ ಹುರುಳಿಜವರನಕೊಪ್ಪಲು ಗ್ರಾಮದ ಶಶಿ ಮೃತ ಮಹಿಳೆಯಾಗಿದ್ದು, ಮತ್ತೊಬ್ಬ ಮಹಿಳೆಯ ಹೆಸರು, ವಿಳಾಸ ಇನ್ನಷ್ಟೇ ಪತ್ತೆ ಆಗಬೇಕಾಗಿದೆ.

ಈ ಇಬ್ಬರು ಮಹಿಳೆಯರು ಕಾಚಿಗುಡ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣ ಮಾಡಿದ್ದು, ಮಂಡ್ಯದಲ್ಲಿ ಇಳಿದು ರೈಲು ಹಳಿ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಳಿ ದಾಟುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರಿನ ಯಲಹಂಕ ಜಂಕ್ಷನ್ ಗೆ ಹೊರಟಿದ್ದ ಮಾಲ್ಗುಡಿ ಎಕ್ಸ್‌ಪ್ರೆಸ್‌ ಢಿಕ್ಕಿ ಹೊಡೆದಿದೆ. ಇದರಿಂದ ರೈಲಿಗೆ ಸಿಲುಕಿ ಅವರಿಬ್ಬರು ಮೃತಪಟ್ಟಿದ್ದಾರೆ.

ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Similar News