ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆ ವಿಚಾರ; ರೇವಣ್ಣ, ಕುಮಾರಸ್ವಾಮಿ ನಿರ್ಧಾರ ಮಾಡುವುದಲ್ಲ: ಸಂಸದ ಪ್ರಜ್ವಲ್‌

Update: 2023-01-25 06:22 GMT

ಮಡಿಕೇರಿ: ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಅವರು ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. 

ಕೊಡಗು ಜಿಲ್ಲೆಯ ಸೋಮವಾರ ಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಹಾಸನದಿಂದ ಭವಾನಿ ರೇವಣ್ಣ ಅವರು ಸ್ಪರ್ಧೆ ಮಾಡುವ ವಿಚಾರವಾಗಿ ರೇವಣ್ಣ ಅವರಾಗಲೀ ಅಥವಾ ಕುಮಾರಸ್ವಾಮಿ ಅವರಾಗಲೀ ನಿರ್ಧಾರ ಮಾಡಲು ಸಾಧ್ಯವಿಲ್ಲ. ರಾಜ್ಯದ ಯಾವುದೇ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾದರೂ ಅವರನ್ನು ದೇವೇಗೌಡರೇ ನಿರ್ಧರಿಸಬೇಕು' ಎಂದು ಸ್ಪಷ್ಟಪಡಿಸಿದರು. 

'ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ' ಎಂದು ಭವಾನಿ ರೇವಣ್ಣ ಮಂಗಳವಾರ ಹೇಳಿಕೆ ನೀಡಿದ್ದರು. 

ಎಚ್‌ಡಿಕೆ ಪ್ರತಿಕ್ರಿಯೆ ಏನು? 

'ಈ ದೇಶದ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲುವ ಹಕ್ಕಿದೆ. ಆದರೆ, ರಾಜ್ಯ ಜನತೆಗೆ ಸಂದೇಶ ಕೊಡುವ ದೃಷ್ಟಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಪಕ್ಷದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ' ಎಂದು ಮಾಜಿ ಮುಖ್ಯ ಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಈ ವಿಚಾರವಾಗಿ ಬಾದಾಮಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿಹಾಸನ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ನಾನೇ ಅಭ್ಯರ್ಥಿ: ಭವಾನಿ ರೇವಣ್ಣ

Similar News