×
Ad

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ

Update: 2023-01-25 14:27 IST

ಚೆನ್ನೈ: ಹವಾಮಾನ ವೈಪರೀತ್ಯದಿಂದಾಗಿ ಆಧ್ಯಾತ್ಮಿಕ ನಾಯಕ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರಿದ್ದ ಹೆಲಿಕಾಪ್ಟರ್ ಇಂದು ಬೆಳಗ್ಗೆ10:30ಕ್ಕೆ  ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಯಾವುದೇ ಗಾಯಗಳ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಷಿಪ್ರ ತಪಾಸಣೆಯ ನಂತರ ಹೆಲಿಕಾಪ್ಟರ್ ಟೇಕಾಫ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಶ್ರೀ ಶ್ರೀ ರವಿಶಂಕರ್ ಸೇರಿದಂತೆ ಎಲ್ಲರೂ ಸುರಕ್ಷಿತವಾಗಿದ್ದಾರೆ. ಹವಾಮಾನ ಸುಧಾರಿಸಿದ ನಂತರ ಹೆಲಿಕಾಪ್ಟರ್ ಟೇಕ್ ಆಫ್ ಆಗಿದೆ" ಎಂದು ಈರೋಡ್ ಕಲೆಕ್ಟರ್ ಎಂಆರ್ ಎಚ್ ಕೃಷ್ಣನುಣ್ಣಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

Similar News