BBC ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಮುಂದಾದ ಜಾಮಿಯಾದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ದಿಲ್ಲಿ ಪೊಲೀಸರು

Update: 2023-01-25 10:16 GMT

ಹೊಸದಿಲ್ಲಿ: ದಿಲ್ಲಿಯ ಪ್ರತಿಷ್ಠಿತ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಲ್ಲಿ (Jamia Millia Islamia university) ಬುಧವಾರ ಸಂಜೆ  ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ (BBC) ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಉದ್ದೇಶಿಸಿರುವ ಎಡಪಂಥೀಯ ವಿದ್ಯಾರ್ಥಿ ಸಂಘದ ಮೂವರು ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೂ  ತರಗತಿಗಳನ್ನು ರದ್ದುಪಡಿಸಿದ್ದಾರೆ.

 ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಫೇಸ್‌ಬುಕ್‌ನಲ್ಲಿ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸುವುದಾಗಿ ಘೋಷಿಸಿದ ನಂತರ ಕ್ಯಾಂಪಸ್‌ನಲ್ಲಿ ಯಾವುದೇ ಅನಧಿಕೃತ ಕೂಟಗಳಿಗೆ ಅವಕಾಶ ನೀಡುವುದಿಲ್ಲ ಎಂದು ಜಾಮಿಯಾ ಅಧಿಕಾರಿಗಳು ಮಂಗಳವಾರ ಹೊರಡಿಸಿದ ಆದೇಶದಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ  ಬಿಬಿಸಿ ಸಾಕ್ಷ್ಯಚಿತ್ರವು ಬಿರುಗಾಳಿ ಎಬ್ಬಿಸಿದ್ದು, ಸರಕಾರವು  ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಕ್ಕೆ ನಿಷೇಧಿಸಿದೆ ಮತ್ತು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಅದರ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಳಿದೆ. ಪ್ರತಿಪಕ್ಷಗಳು ಈ ಕ್ರಮವನ್ನು ಘೋರ ಸೆನ್ಸಾರ್‌ಶಿಪ್ ಎಂದು ಟೀಕಿಸಿವೆ.

Similar News