ಕುಶಾಲನಗರ: ಪಿಡಿಓ ಮೇಲೆ ಹಲ್ಲೆ ಆರೋಪ; ಪ್ರಕರಣ ದಾಖಲು

Update: 2023-01-25 13:21 GMT

ಮಡಿಕೇರಿ ಜ.25 : ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾ.ಪಂ ಪಿಡಿಓ ಹೆಚ್.ಎಸ್.ಅನಿಲ್ ಕುಮಾರ್ ಅವರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿರುವ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬಸವ ವಸತಿ ಯೋಜನೆಯ ಫಲಾನುಭವಿಯೊಬ್ಬರ ಮನೆಯ ಜಿಪಿಎಸ್ ಮಾಡಲು ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ 3ನೇ ವಾರ್ಡ್‍ಗೆ ಭೇಟಿ ನೀಡಿ ಮರಳುತ್ತಿದ್ದಾಗ ಸ್ಥಳೀಯ ಇಬ್ಬರು ವ್ಯಕ್ತಿಗಳು ಇದು ಖಾಸಗಿ ರಸ್ತೆ, ಇಲ್ಲಿ ಯಾಕೆ ಬಂದಿದ್ದೀರಿ ಎಂದು ಬೈಕ್ ನ ಕೀ ಕಿತ್ತುಕೊಂಡು ಅವಾಚ್ಯ ಶಬ್ಧ ಬಳಸಿ ಹಲ್ಲೆ ಮಾಡಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಅನಿಲ್ ಕುಮಾರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.  

Similar News