×
Ad

74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2023-01-26 10:23 IST

ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದರು.

ಶುಭ ಕೋರಿದ ಸಿಎಂ ಬೊಮ್ಮಾಯಿ:  ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುತ್ತಾ, ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಿ, ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. 

Similar News