ಮಂಗಳೂರು ವಿವಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2023-01-26 10:28 GMT

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಗುರುವಾರ ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಲ್ ಎ.ಕೆ.ಜಯಚಂದ್ರನ್ ಅವರು,  ವಿಶೇಷವಾಗಿ ಈ ಗಣರಾಜ್ಯೋತ್ಸವದ ದಿನ ದೇಶಕ್ಕಾಗಿ ತ್ಯಾಗ ಬಲಿದಾನವನ್ನು ಮಾಡಿದ ಮಹನೀಯರನ್ನು ನಾವು  ಸ್ಮರಿಸುವಂತಹ ದಿನವಾಗಿದೆ. ಜೊತೆಗೆ ಈ ದಿನ ಮಹತ್ವವನ್ನು ಅರಿತುಕೊಂಡು ಡಾ.ಬಿ.ಆರ್ .ಅಂಬೇಡ್ಕರ್ ಅವರು ಕಲ್ಪಸಿಕೊಟ್ಟ ಭಾರತದ ಸಂವಿಧಾನದ ಆಶಯಗಳನ್ನು ಗೌರವಿಸುವ ಅನುಷ್ಠಾನಗೊಳಿಸುವಲ್ಲಿ ಯುವ ಸಮುದಾಯದ ಪಾತ್ರ ಮಹತ್ವವಾದದ್ದು ಎಂದರು.

ಮಂಗಳೂರು‌ ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ  ಮಾತನಾಡಿ, ನಾವೆಲ್ಲರೂ ಸಂವಿಧಾನಕ್ಕೆ ಗೌರವಿಸುವುದರೊಂದಿಗೆ ಆತ್ಮನಿರ್ಭರ, ಬಲಿಷ್ಠ ದೇಶ ನಿರ್ಮಾಣಕ್ಕೆ ಪಣತೊಡಬೇಕು ಎಂದರು.

ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ‌. ಸ್ವಾಗತಿಸಿದರು. ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ ವಂದಿಸಿದರು. ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.

Similar News