ಬಂಟ್ವಾಳದಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ

Update: 2023-01-26 10:33 GMT

ಬಂಟ್ವಾಳ, ಜ.26: ಬಂಟ್ವಾಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಸಮಾರಂಭವು ಗುರುವಾರ ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಧ್ವಜಾರೋಹಣ ನೆರವೇರಿಸಿದ ಬಂಟ್ವಾಳ ತಹಶೀಲ್ದಾರ್ ದಯಾನಂದ್  ಮಾತನಾಡಿ, ಅಖಂಡ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಜತೆಯಾಗಿ ಶ್ರಮಿಸೋಣ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಬಂಟ್ವಾಳದಲ್ಲಿ ಯುವಜನರಲ್ಲಿ ದೇಶಭಕ್ತಿ ಬೆಳೆಯಲು ನಿಮ್ಮ ಮಾರ್ಗದರ್ಶನ ಅತಿ ಅಗತ್ಯವಾಗಿದೆ. ಅಂಬೇಡ್ಕರ್ ಅವರ ಆದರ್ಶದಿಂದ ಯುವ ಜನತೆ ತಮ್ಮ ಭವಿಷ್ಯ ರೂಪಿಸಬೇಕಿದೆ ಎಂದರು.

ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಡಾ.ಮಂಜುನಾಥ್ ರೇವಣ್ಕರ್ ಉಪನ್ಯಾಸ ನೀಡಿ, ಸಂವಿಧಾನವೇ ದೇಶದ ಜೀವಾಳವಾಗಿದ್ದು, ಇದರ ಪರಿಣಾಮವಾಗಿಯೇ ದೇಶ ವಿಶ್ವಮಾನ್ಯವಾಗುತ್ತಿದೆ ಎಂದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರಟ್, ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ವೆಂಕಪ್ಪ ಉಪಸ್ಥಿತರಿದ್ದರು.

ಎಸೆಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ ತಾಲೂಕಿನ ಸರಕಾರಿ ಶಾಲೆಗಳ ನಾಲ್ವರು ವಿದ್ಯಾರ್ಥಿಗಳಿಗೆ ಲಾಪ್‌ಟಾಪ್ ವಿತರಿಸಲಾಯಿತು. ಗ್ರಾಮೀಣ ಭಾಗದಲ್ಲಿ ಸರಕಾರಿ ಯೋಜನೆ ತಲುಪಿತ್ತಿರುವ ಗ್ರಾಮವನ್ ಕೇಂದ್ರದಲ್ಲಿ ಉತ್ತಮ ಸೇವೆ ನೀಡಿದ ಮೂವರನ್ನು ಸನ್ಮಾನಿಸಲಾಯಿತು.

ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ ವಿದ್ಯಾರ್ಥಿಗಳ ವಿವರ ನೀಡಿದರು. ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು ಗ್ರಾಮ ವನ್ ಸಾಧಕರ ವಿವರ ನೀಡಿದರು.

ಇದೇ ವೇಳೆ  ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ.ಸ್ವಾಗತಿಸಿ, ತಾ.ಪಂ. ಸಹಾಯಕ ನಿರ್ದೇಶಕ ದಿನೇಶ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

Similar News