ತಿ.ನರಸೀಪುರ: ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ; ಅಧಿಕಾರಿಗಳನ್ನು ಅಭಿನಂದಿಸಿ ಟ್ವೀಟ್ ಮಾಡಿದ ಸಿಎಂ

''ಚಿರತೆ ಕಾರ್ಯಪಡೆ ರಚನೆಗೆ ಆದೇಶ''

Update: 2023-01-26 12:27 GMT

ತಿ.ನರಸೀಪುರ: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಕೊಳತ್ತೂರು ಪಂಚಾಯತಿಯ ನರಗ್ಯಾತನಹಳ್ಳಿಯಲ್ಲಿ ಚಿರತೆಯೊಂದು  ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಈ ಭಾಗದ ಜನರಲ್ಲಿ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. 

ಚಿರತೆ ದಾಳಿಯಿಂದ ತಾಲೂಕಿನಲ್ಲಿ 3 ತಿಂಗಳಲ್ಲಿ ನಾಲ್ಕು ಸಾವುಗಳು ಸಂಭವಿಸಿದ್ದು, ಇದೀಗ ಅಧಿಕಾರಿಗಳ ಯಶಸ್ವಿ ಕಾರ್ಯಾಚಾರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ಲಾಘಿಸಿದ್ದಾರೆ. 

[ ನರಗ್ಯಾತನಹಳ್ಳಿ ಸಮೀಪ ಬೋನಿಗೆ ಬಿದ್ದ ಚಿರತೆ ]

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಮೈಸೂರಿನ ಭಾಗದ ಸಾರ್ವಜನಿಕರಿಗೆ ಭೀತಿಯನ್ನುಂಟು ಮಾಡಿದ್ದ, ನರಭಕ್ಷಕ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದು, ಸಾರ್ವಜನಿಕರ ನೆಮ್ಮದಿಗೆ ಕಾರಣರಾದ ಅರಣ್ಯ ಅಧಿಕಾರಿಗಳ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ'' ಎಂದು ಹೇಳಿದ್ದಾರೆ. 

''ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಚಿರತೆ ಕಾರ್ಯಪಡೆಯನ್ನು ರಚಿಸಿ, ಇಂದೇ ಸರಕಾರಿ ಆದೇಶ ಹೊರಡಿಸಲಾಗುವುದು" ಎಂದು ತಿಳಿಸಿದ್ದಾರೆ. 

Similar News