ಅನುದಾನ, ಅಭಿವೃದ್ಧಿ ಬಗ್ಗೆ ಪ್ರಸ್ತಾಪಿಸಿದ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿಯಿಂದ ಮೈಕ್ ಕಸಿದುಕೊಂಡ ಬೊಮ್ಮಾಯಿ!

Update: 2023-01-26 17:10 GMT

ಬೆಂಗಳೂರು, ಜ.26: ಕಾರ್ಯಕ್ರಮವೊಂದರಲ್ಲಿ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಅವರು ಅನುದಾನ, ಅಭಿವೃದ್ಧಿ ಬಗ್ಗೆ ಪ್ರಸ್ತಾಪ ಮಾಡಿದಾಗ ಸ್ವಾಮೀಜಿಯಿಂದ ಮೈಕ್ ಕಿತ್ತುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 'ನಾನು ಆಶ್ವಾಸನೆ ಕೊಡುವ ಸಿಎಂ ಅಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. 

ನಗರದ ಗರುಡಾಚಾರ್ ಪಾಳ್ಯದಲ್ಲಿರುವ ಮಂಜುನಾಥಸ್ವಾಮಿ ದೇಗುಲದಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಿಎಂ ಬೊಮ್ಮಾಯಿ, ಸಚಿವ ಎಂ. ಟಿ. ಬಿ. ನಾಗರಾಜ್ ಸಢರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಈಶ್ವರಾನಂದ ಸ್ವಾಮೀಜಿ ಮಾತನಾಡಿ, ಬೆಂಗಳೂರು ನಗರದಲ್ಲಿ ಮಳೆ ಬಂದರೆ ಜನರು ಕಷ್ಟ ಎದುರಿಸುವ ಪರಿಸ್ಥಿತಿ ಇದೆ.  ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಾರೆ. ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಈಗಾಗಲೇ ಬೆಂಗಳೂರು ನಗರದ ಅಭಿವೃದ್ಧಿಗೆ ಶಾಶ್ವತ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದಾರೆ. ಅವರ ಭರವಸೆಯನ್ನ ನಾವು ಒಪ್ಪಲ್ಲ ಎಂದು ಹೇಳುತ್ತಿದ್ದಂತೆ ಸಿಎಂ ಬೊಮ್ಮಾಯಿ ಅವರು ಸ್ವಾಮೀಜಿಯಿಂದ ಮೈಕ್ ಕಿತ್ತುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು 'ನನ್ನಿಂದ ಆದ್ರೆ ಕೊಡ್ತೇನೆ ಎಂದು ಹೇಳುವೆ, ಇಲ್ಲದಿದ್ದರೆ ಆಗಲ್ಲ ಎನ್ನುವೆ. ನಾನು ಆಶ್ವಾಸನೆ ಕೊಡುವ ಸಿಎಂ ಅಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ. 

ಇದನ್ನೂ ಓದಿ: 'ಮಂಡ್ಯ ಬಿಟ್ಟು ಹೋಗಿ': ಬಿಜೆಪಿಗರಿಂದಲೇ ‘GO BACK​ ಆರ್​.ಅಶೋಕ್’​ ಅಭಿಯಾನ

Similar News