ಉಡುಪಿ: ರಾಜ್ಯ ಯಕ್ಷಗಾನ ಸಮ್ಮೇಳನದ ಬಗ್ಗೆ ಅಂಗಾರ ನೇತೃತ್ವದಲ್ಲಿ ಸಭೆ

Update: 2023-01-26 14:21 GMT

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇದೇ ಫೆ.11 ಮತ್ತು 12ರಂದು ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನದ ಕುರಿತಂತೆ ಇಂದು   ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿ ನಡೆಯುವ ಯಕ್ಷಗಾನ ಸಮ್ಮೇಳನದ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು. ಅಗತ್ಯ ಸೂಚನೆಗಳನ್ನು, ಸಮ್ಮೇಳನದಲ್ಲಿ ಇರಬೇಕಾದ ವಿವಿಧ ವಿಷಯಗಳ ಕುರಿತು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಅಜ್ಜರಕಾಡು ಮಹಾತ್ಮಗಾಂಧಿ ಸ್ಟೇಡಿಯಂನಲ್ಲಿ ನಡೆದ ಸಭೆಯಲ್ಲಿ ಶಾಸಕ ರಘುಪತಿ ಭಟ್, ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷ ಡಾ.ಜಿ.ಎಲ್ ಹೆಗ್ಡೆ, ಪ್ರಧಾನ ಸಂಚಾಲಕರಾದ ಮುರಳಿ ಕಡೆಕಾರ್, ಪಿ. ಕಿಶನ್ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಪಂ ಸಿಇಓ ಪ್ರಸನ್ನ ಎಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಪಿ. ಶಿವರುದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Similar News

ನಾಪತ್ತೆ