ಕರಾವಳಿಯಲ್ಲಿ ಸಂವಿಧಾನದ ಆಶಯ ಸಮರ್ಪಕ ಅನುಷ್ಠಾನ: ಎಸಿ ಕೆ. ರಾಜು

Update: 2023-01-26 18:26 GMT

ಕುಂದಾಪುರ: ಸಂವಿಧಾನದ ದೈಯೋದ್ಧೇಶಗಳಂತೆ ಕಾರ್ಯನಿರ್ವ ಹಿಸಿ, ಜಾಗತಿಕ ಮಟ್ಟದಲ್ಲಿ ಶಕ್ತಿಯಾಗಿ ಹೊರಹೊಮ್ಮುವ ಸಾಮರ್ಥ್ಯ ಭಾರತ ದೇಶಕ್ಕಿದೆ ಎಂಬುದು ಆತ್ಮವಿಶ್ವಾಸದಿಂದ ಹೇಳಬಹುದು. ಸಬಲೀಕರಣ, ಸ್ವಗೌರವ ಸ್ವಂತಿಕೆ, ಆರ್ಥಿಕ ಸ್ವಾವಲಂಬನೆ ಮೊದಲಾದ ಸಂವಿಧಾನದ ಆಶಯಗಳು ಕರಾವಳಿ ಪ್ರದೇಶದಲ್ಲಿ ಬೇರೆಡೆಗಳಿಂತ ಉತ್ತಮ ಅನುಷ್ಠಾನವಾಗುತ್ತಿದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಹೇಳಿದ್ದಾರೆ.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಕರಾವಳಿ ತೀರ ಪಶ್ಚಿಮ-ಘಟ್ಟ ಸುಂದರ ಪ್ರಾಕೃತಿಕ ವ್ಯವಸ್ಥೆಯಲ್ಲಿ ಪ್ರವಾ ಸೋದ್ಯಮಕ್ಕೆ ಉತ್ತೇಜನ ನೀಡುವ ಮೂಲಕ ಉದ್ಯೋಗವಕಾಶಗಳ ಸೃಜನೆ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜಿಸುವ ಪ್ರಯತ್ನ ಜಿಲ್ಲಾಡಳಿತದ್ದಾಗಿದೆ ಎಂದು ಅವರು ತಿಳಿಸಿದರು.

ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷ ವಿಜಯ ಎಸ್.ಪೂಜಾರಿ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಅಕ್ಷರದಾಸೋಹ ಅಧಿಕಾರಿ ಅರುಣ್ ಕುಮಾರ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ಆರ್.ವರ್ಣೇಕರ್, ತಾಲೂಕು ಪಂಚಾಯಿತಿ ಇಒ ಮಹೇಶ್ ಕುಮಾರ್ ಹೊಳ್ಳ, ಪುರಸಭೆ ಸದಸ್ಯ ರಾದ ಪ್ರಭಾವತಿ ಶೆಟ್ಟಿ, ಚಂದ್ರಶೇಖರ ಖಾರ್ವಿ, ದೇವಕಿ ಪಿ.ಸಣ್ಣಯ್ಯ, ಉಪತಹಶೀಲ್ದಾರ್ ವಿನಯ್, ಮುಖ್ಯಾಧಿಕಾರಿ ಮಂಜುನಾಥ ಆರ್., ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ದೈಹಿಕ ಶಿಕ್ಷರ ಸಂಘ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಎಸ್ಸೈ ಸದಾಶಿವ ಆರ್.ಗವರೋಜಿ ಉಪಸ್ಥಿತರಿದ್ದರು.

ಕುಂದಾಪುರ ತಹಸೀಲ್ದಾರ್ ಕಿರಣ್ ಜಿ.ಗೌರಯ್ಯ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನೀರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್. ವಂದಿಸಿದರು. ಕುಂದಾಪುರ ಪೊಲೀಸ್ ಠಾಣೆ ಅಪರಾಧ ವಿಭಾಗದ ಉಪನಿರೀಕ್ಷಕ ಪ್ರಸಾದ್ ನೇತೃತ್ವದಲ್ಲಿ ಆಕರ್ಷಕ ಪಥಸಂಚನ ನಡೆಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.

Similar News