ಚಿಕ್ಕಮಗಳೂರು | ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ

Update: 2023-01-27 04:53 GMT

ಚಿಕ್ಕಮಗಳೂರು: ಕಾಡುಕೋಣವೊಂದು ಬೈಕ್ ಸವಾರರ ಮೇಲೆ ದಾಳಿ ಮಾಡಿರುವ ಪರಿಣಾಮ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಣಕಲ್ ಸಮೀಪದ ಮತ್ತಿಕಟ್ಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಕಲ್ಯಾಣಗದ್ದೆಯ ದಿಲೀಪ್, ಆಶಾ ಗಾಯಗೊಂಡವರು ಎಂದು ತಿಳಿದುಬಂದಿದೆ. ಮತ್ತಿಕಟ್ಟೆ ರಸ್ತೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರರು ಗಾಯಗೊಂಡಿದ್ದಾರೆ. ಗಾಯಾಳುಗಳು ಬಣಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ಬೈಕ್ ನಜ್ಜುಗುಜ್ಜಾಗಿದೆ.

Similar News