ಆರೋಪಿ ಸ್ಯಾಂಟ್ರೊ ರವಿಯ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
Update: 2023-01-27 15:24 IST
ಬೆಂಗಳೂರು: ಅತ್ಯಾಚಾರ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಆರೋಪದಡಿ ಬಂಧನಕ್ಕೊಳಗಾಗಿರುವ ಮಂಜುನಾಥ್ ಕೆ.ಎಸ್. ಅಲಿಯಾಸ್ ಸ್ಯಾಂಟ್ರೊ ರವಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.
ಆರೋಪಿ ಸ್ಯಾಂಟ್ರೊ ರವಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು, ನಿನ್ನೆ ಸಂಜೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ ಎನ್ನಲಾಗಿದೆ. ಕೂಡಲೇ ಆತನನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.