ರಾಜ್ಯ ಕಾಂಗ್ರೆಸ್‍ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿ ಮಾಡಿದ ಎಚ್.ವಿಶ್ವನಾಥ್

Update: 2023-01-27 14:57 GMT

ಮೈಸೂರು,ಜ.27: ರಾಜ್ಯ ಕಾಂಗ್ರೆಸ್‍ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್‍ ಕಾಂಗ್ರೆಸ್ ಪಕ್ಷವನ್ನು ಸೇರುವುದು ಖಚಿತ ಎಂಬ ಸಂದೇಶವನ್ನು ನೀಡಿದ್ದಾರೆ.

ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.ಇ ದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

ಈಗಾಗಲೇ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಇದೀಗ ಮೈಸೂರಿನಲ್ಲಿಯೇ ಕಾಂಗ್ರೆಸ್ ನಾಯಕರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಬಿಜೆಪಿ ತೊರೆಯುವುದು ಸ್ಪಷ್ಟ ಎಂಬ ಸಂದೇಶವನ್ನು ನೀಡಿದ್ದಾರೆ.

ಇದನ್ನೂ ಓದಿ: ಎಚ್. ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ: ಡಿ.ಕೆ ಶಿವಕುಮಾರ್

Similar News