ಮಂಗಳೂರು: ಡ್ರಗ್ಸ್ ಪ್ರಕರಣದ 13 ಮಂದಿ ಆರೋಪಿಗಳಿಗೆ ಜಾಮೀನು

Update: 2023-01-27 15:39 GMT

ಮಂಗಳೂರು: ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ಪೈಕಿ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಉಳಿದ 11 ಮಂದಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜ.11ರಂದು 15 ಮಂದಿಯನ್ನು ಬಂಧಿಸಿದ್ದರು. ಬಳಿಕ ಮತ್ತೊಂದು ಕಾರ್ಯಾಚರಣೆಯಲ್ಲಿ ಮತ್ತೆ 9 ಮಂದಿಯನ್ನು ಬಂಧಿಸಲಾಗಿತ್ತು. ಈ 24 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ 5 ಮಂದಿ ವೈದ್ಯರು, 17 ಮಂದಿ ವೈದ್ಯ ವಿದ್ಯಾರ್ಥಿಗಳಾಗಿದ್ದಾರೆ. ಇದೀಗ ಪ್ರಥಮ ಹಂತದಲ್ಲಿ ಬಂಧಿತರಾಗಿರುವ 13 ಮಂದಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಇದನ್ನೂ ಓದಿ: ಧರ್ಮಗಳ ಮಧ್ಯೆ ದ್ವೇಷ ಹುಟ್ಟಿಸುವ ಸುಳ್ಳು ವಿಡಿಯೋ ಸೃಷ್ಠಿ: ಪ್ರಕಾಶ್ ಮಲ್ಪೆ ವಿರುದ್ಧ ಪ್ರಕರಣ ದಾಖಲು

Similar News