ಟೀಂ ಬಿ-ಹ್ಯೂಮನ್ ಮತ್ತು ಯೆನೆಪೊಯ ಆಸ್ಪತ್ರೆ ವತಿಯಿಂದ ವೈದ್ಯಕೀಯ ಶಿಬಿರ

Update: 2023-01-27 15:43 GMT

ಮಂಗಳೂರು: ಟೀಂ ಬಿ-ಹ್ಯೂಮನ್ (ರಿ) ಮಂಗಳೂರು ಹಾಗೂ ಯೆನೆಪೊಯ ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಗ್ರಾಪಂ ಉಜಿರೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ ಇವರ ಸಹಭಾಗಿತ್ವದಲ್ಲಿ ಉಜಿರೆಯ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇತ್ತೀಚೆಗೆ ನಡೆಯಿತು.

ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್. ಶಿಬಿರವನ್ನು ಉದ್ಘಾಟಿಸಿದರು. ಈ ಸಂಧರ್ಭ ಬಿ-ಹ್ಯೂಮನ್ ಸಂಸ್ಥೆಯ ಸಂಸ್ಥಾಪಕ ಕೆ. ಆಸಿಫ್ ಡೀಲ್, ಯೆನೆಪೊಯ ಆಸ್ಪತ್ರೆಯ ಆಡಳಿತಾಧಿಕಾರಿ ರಝಾಕ್ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮನೋರಮಾ ಭಟ್, ಕಾರ್ಯದರ್ಶಿ ರಕ್ಷಾ ರಾಗ್ನಿಶ್, ಬಿ.ಕೆ. ಧನಂಜಯ ರಾವ್ ಮತ್ತಿತರರು ಉಪಸ್ಥಿತರಿದ್ದರು.

Similar News