ಸುಳ್ಯ: ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಮೃತ್ಯು

Update: 2023-01-27 15:58 GMT

ಸುಳ್ಯ: ರಿಕ್ಷಾ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಮಂಡೆಕೋಲಿನ ಕನ್ಯಾನದ ರಾಜೇಶ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜ.21 ರಂದು ಸಂಜೆ ರಾಜೇಶ್ ಅವರು ಮನೆ ಸಮೀಪ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ. ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯವಾಗಿತ್ತು. ಮನೆಯವರು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ರಾಜೇಶ್ ಮೃತಪಟ್ಟಿದ್ದಾರೆ.

Similar News