ಫೆಬ್ರವರಿ 10ರೊಳಗೆ ಕೆಆರ್‌ಪಿಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜನಾರ್ದನ ರೆಡ್ಡಿ

Update: 2023-01-27 17:23 GMT

ರಾಯಚೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ 10ರೊಳಗೆ ಪ್ರಕಟಿಸುವುದಾಗಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಲ್ಯಾಣ ಕರ್ನಾಟಕದ ಒಟ್ಟು 30 ಕ್ಷೇತ್ರಗಳಲ್ಲಿ 13 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನೊಂದು ವಾರದಲ್ಲಿ ಇಲ್ಲವೇ ಫೆಬ್ರವರಿ 10ರೊಳಗೆ ರಾಜ್ಯದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು'' ಎಂದು ತಿಳಿಸಿದರು.

ಇದನ್ನೂ ಓದಿ:  ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರ: ಸ್ಪಷ್ಟನೆ ನೀಡಿದ ಕೆಆರ್‌ಪಿಪಿ ಮುಖಂಡ

Similar News