ಬೆಂಗಳೂರು | ಸರಣಿ ಅಫಘಾತ: ಬಿಎಂಟಿಸಿ ಬಸ್ಸಿನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

Update: 2023-01-28 04:18 GMT

ಬೆಂಗಳೂರು: ಬಿಎಂಟಿಸಿ ಬಸ್‌ನಿಂದ ಸರಣಿ ಅಫಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟಿರುವ ಘಟನೆ  ನಗರದ ಭಾರತೀಯ ಸಿಟಿ ಕ್ರಾಸ್ ಬಳಿ (ಶುಕ್ರವಾರ) ಸಂಜೆ ವರದಿಯಾಗಿದೆ. 

ಮೃತ ಬೈಕ್ ಸವಾರನನ್ನು ಅಯೂಬ್ (35) ಎಂದು ಗುರುತಿಸಲಾಗಿದೆ. 

ನಾಗವಾರ-ಯಲಹಂಕ ಮಾರ್ಗದಲ್ಲಿ ಭಾರತೀಯ ಸಿಟಿ ಕ್ರಾಸ್ ಬಳಿ ಸರಣಿ ಅಪಘಾತ ಸಂಬವಿಸಿದೆ. ಪರಿಣಾಮ ಎರಡು ಕಾರು, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್‌ ಢಿಕ್ಕಿ ಹೊಡೆದಿದ್ದು, ಓರ್ವ ಮೃತಪಟ್ಟರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಕೆಲ ದಿನಗಳ ಹಿಂದಷ್ಟೇ ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. 

Similar News