ಮುಸ್ಲಿಮರ ಅಭಿವೃದ್ಧಿಗೆ ವಕ್ಫ್ ಆಸ್ತಿಗಳ ಸದ್ಬಳಕೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2023-01-28 07:52 GMT

ವಿಜಯನಗರ(ಹೊಸಪೇಟೆ), ಜ.28: ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳನ್ನು ಮುಸ್ಲಿಮ್ ಸಮುದಾಯದ ಅಭಿವೃದ್ಧಿಗೆ ಸದ್ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನೂತನ ಕಚೇರಿಯನ್ನು ಶುಕ್ರವಾರ ರಾತ್ರಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಕ್ಫ್ ಆಸ್ತಿಗಳ ಅತಿಕ್ರಮಣ ತೆರವಿಗೆ ಆದ್ಯತೆ ನೀಡಲಾಗಿದೆ.  ವಕ್ಫ್ ಸಚಿವರು ಹಾಗೂ ವಕ್ಫ್ ಬೋರ್ಡ್ ಅಧ್ಯಕ್ಷರ ನೇತೃತ್ವದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿಯನ್ನು ತೆರವು ಮಾಡುವ ಕೆಲಸ ಪ್ರಗತಿಯಲ್ಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ವಕ್ಫ್ ಆಸ್ತಿಗಳಲ್ಲಿ ಮುಸ್ಲಿಮರ ಶೈಕ್ಷಣಿಕ ಪ್ರಗತಿಗಾಗಿ ವಕ್ಫ್ ಬೋರ್ಡ್ ಕೈಗೊಳ್ಳುವ ಎಲ್ಲ ಕಾರ್ಯಗಳಿಗೆ ರಾಜ್ಯ ಸರಕಾರ ಅಗತ್ಯ ನೆರವು ನೀಡಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹಾಗೂ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Similar News