2ನೇ ಟ್ವೆಂಟಿ-20: ಭಾರತಕ್ಕೆ 100 ರನ್ ಗುರಿ ನೀಡಿದ ನ್ಯೂಝಿಲ್ಯಾಂಡ್

Update: 2023-01-29 15:25 GMT

ಲಕ್ನೊ, ಜ.29: ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಭಾರತ ಕ್ರಿಕೆಟ್ ತಂಡ 2ನೇ ಟ್ವೆಂಟಿ-20 ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಕೇವಲ 99 ರನ್‌ಗೆ ನಿಯಂತ್ರಿಸಿ ಗೆಲ್ಲಲು ಸುಲಭ ಸವಾಲು ಪಡೆದಿದೆ.

ರವಿವಾರ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲ್ಯಾಂಡ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿತು. ನಾಯಕ ಮಿಚೆಲ್ ಸ್ಯಾಂಟ್ನರ್(ಔಟಾಗದೆ 19)ಸರ್ವಾಧಿಕ ಸ್ಕೋರ್ ಗಳಿಸಿದರು.

ಅರ್ಷದೀಪ್ ಸಿಂಗ್(2-7)ಯಶಸ್ವಿ ಬೌಲರ್ ಎನಿಸಿಕೊಂಡರು. ಐವರು ಬೌಲರ್‌ಗಳು ತಲಾ ಒಂದು ವಿಕೆಟ್ ಪಡೆದರು.
 

Similar News