2ನೇ ಟ್ವೆಂಟಿ-20: ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ ಜಯ, ಸರಣಿ ಸಮಬಲ

Update: 2023-01-29 17:05 GMT

ಲಕ್ನೊ, ಜ.29: ಅರ್ಷದೀಪ್ ಸಿಂಗ್ ನೇತೃತ್ವದ ಬೌಲರ್‌ಗಳ ಸಂಘಟಿತ ಬೌಲಿಂಗ್ ದಾಳಿ ಹಾಗೂ ಸೂರ್ಯಕುಮಾರ್ ಯಾದವ್(ಔಟಾಗದೆ 26 ರನ್,31 ಎಸೆತ) ಅವರ ಸಾಂದರ್ಭಿಕ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡ ನ್ಯೂಝಿಲ್ಯಾಂಡ್ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ.

 ರವಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 100 ರನ್ ಗುರಿ ಪಡೆದ ಭಾರತವು 19.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತು. ಭಾರತದ ಪರ ಇಶಾನ್ ಕಿಶನ್(19 ರನ್), ನಾಯಕ ಹಾರ್ದಿಕ್ ಪಾಂಡ್ಯ(ಔಟಾಗದೆ 15),ಶುಭಮನ್ ಗಿಲ್(11ರನ್) ಹಾಗೂ ಸುಂದರ್(10)ಎರಡಂಕೆಯ ಸ್ಕೋರ್ ಗಳಿಸಿದರು.

ಇದಕ್ಕೂ ಮೊದಲು ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲ್ಯಾಂಡ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಲಷ್ಟೇ ಶಕ್ತವಾಯಿತು. ಟಿ-20ಯಲ್ಲಿ ಭಾರತ ವಿರುದ್ಧ ಕನಿಷ್ಠ ಸ್ಕೋರ್ ಗಳಿಸಿತು. ತನ್ನ ಇನಿಂಗ್ಸ್‌ನಲ್ಲಿ ಒಂದೇ ಒಂದು ಸಿಕ್ಸರ್ ಬಾರಿಸುವಲ್ಲಿಯೂ ವಿಫಲವಾಯಿತು.
 

Similar News