ರಾಹುಲ್ ಗಾಂಧಿ ಅವರ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಭಾರೀ ಹಿಮಪಾತ ಅಡ್ಡಿ ಸಾಧ್ಯತೆ

Update: 2023-01-30 05:34 GMT

ಹೊಸದಿಲ್ಲಿ: ಕಾಶ್ಮೀರದ ಶ್ರೀನಗರದಲ್ಲಿ ಭಾರೀ ಹಿಮಪಾತವು ಇಂದು ನಡೆಯಲಿರುವ ಕಾಂಗ್ರೆಸ್‌ನ ಪ್ಯಾನ್-ಇಂಡಿಯಾ ಪಾದಯಾತ್ರೆ 'ಭಾರತ್ ಜೋಡೊ ಯಾತ್ರೆ'ಯ ಸಮಾರೋಪ ಸಮಾರಂಭದ ಸಂಭ್ರಮಾಚರಣೆಯ ಉತ್ಸಾಹವನ್ನು ಕುಗ್ಗಿಸಬಹುದು.

135 ದಿನಗಳ ಸುದೀರ್ಘ ಕನ್ಯಾಕುಮಾರಿ-ಕಾಶ್ಮೀರ ಯಾತ್ರೆಯ ಸಮಾರೋಪದ ಅಂಗವಾಗಿ   ಕಾಂಗ್ರೆಸ್ ಪಕ್ಷವು ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೆಗಾ ರ್ಯಾಲಿಯನ್ನು ಆಯೋಜಿಸುತ್ತಿದೆ. ಇಡೀ ಕಾಂಗ್ರೆಸ್ ನಾಯಕತ್ವವಲ್ಲದೆ , ವಿರೋಧ ಪಕ್ಷಗಳ ಹನ್ನೆರಡು ನಾಯಕರು ರ್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದಾಗ್ಯೂ, ಹಿಮಪಾತವು ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚುವಂತೆ ಮಾಡಿದೆ. ಇದು ವಿಮಾನ ಸಂಚಾರಕ್ಕೂ ಅಡ್ಡಿಪಡಿಸಬಹುದು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಹಲವು ವಿರೋಧ ಪಕ್ಷದ ನಾಯಕರಿಗೆ ಭಾಗವಹಿಸಲು ಸಾಧ್ಯವಾಗದಿರಬಹುದು.

ಕಡಿಮೆ ಗೋಚರತೆ ಹಾಗೂ  ನಿರಂತರ ಹಿಮಪಾತವು ಶ್ರೀನಗರಕ್ಕೆ ಎಲ್ಲಾ ವಿಮಾನಗಳನ್ನು ವಿಳಂಬಗೊಳಿಸಿದೆ ಎಂದು ಶ್ರೀನಗರದ ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ವಿಸ್ತಾರಾ ಏರ್‌ಲೈನ್ಸ್ ದಿಲ್ಲಿಯಿಂದ ಶ್ರೀನಗರಕ್ಕೆ ತನ್ನ ಎರಡೂ ವಿಮಾನಗಳನ್ನು ದಿನದ ಮಟ್ಟಿಗೆ ರದ್ದುಗೊಳಿಸಿದೆ.

Similar News