ಕಾಸರಗೋಡು | ಬಸ್, ಪಿಕಪ್ ವಾಹನದ ನಡುವೆ ಅಪಘಾತ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

Update: 2023-01-30 06:38 GMT

ಕಾಸರಗೋಡು: ಬಸ್ ಮತ್ತು ಪಿಕಪ್ ವಾಹನದ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಅಂಬಲತ್ತರ ಪಾರಪಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಪನತ್ತಡಿಯ ನಿವಾಸಿ ಯೂಸುಫ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಸರು ತಿಳಿದುಬಂದಿಲ್ಲ.

ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ ಮತ್ತು  ಪಿಕಪ್ ನಡುವೆ  ಈ ಅಪಘಾತ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

Similar News