ಶಾರ್ಜಾದಿಂದ ಕೊಚ್ಚಿಗೆ ಬರುತ್ತಿದ್ದ ವಿಮಾನದಲ್ಲಿ ತಾಂತ್ರಿಕ ವೈಫಲ್ಯ: ವಿಮಾನ ನಿಲ್ದಾಣದಲ್ಲಿ ತುರ್ತುಸ್ಥಿತಿ ಘೋಷಣೆ

Update: 2023-01-30 06:50 GMT

ಕೊಚ್ಚಿ: ರವಿವಾರ ಶಾರ್ಜಾದಿಂದ (Sharjah) ಕೊಚ್ಚಿಗೆ ಬರುತ್ತಿದ್ದ ವಿಮಾನದಲ್ಲಿ ಹೈಡ್ರಾಲಿಕ್ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿದ್ದರಿಂದ, ಕೊಚ್ಚಿ ವಿಮಾನದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಗಿತ್ತು. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kochi airport) ನಿಯಮಿತವು, ವಿಮಾನ ನಿಲ್ದಾಣದಲ್ಲಿ ರಾತ್ರಿ 8.04ರಂದು ಸಂಪೂರ್ಣ ತುರ್ತುಸ್ಥಿತಿ ಘೋಷಿಸಿದ ನಂತರ, ವಿಮಾನವು ರಾತ್ರಿ 8.26ರ ವೇಳೆಗೆ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು ಎಂದು ಹೇಳಿದೆ ಎಂದು 

"IX 412 ವಿಮಾನದಲ್ಲಿ ಅನುಮಾನಾಸ್ಪದ ಹೈಡ್ರಾಲಿಕ್ ವೈಫಲ್ಯ ಕಾಣಿಸಿಕೊಂಡಿತು. ಹೀಗಾಗಿ, ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರಾತ್ರಿ 8.04ರ ವೇಳೆಗೆ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. ರಾತ್ರಿ 8.26ರ ವೇಳೆಗೆ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು" ಎಂದು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು ಪ್ರಕಟಣೆಯಲ್ಲಿ ತಿಳಿಸಿದೆ.

ತುರ್ತುಸ್ಥಿತಿಯನ್ನು ಹಿಂಪಡೆದ ನಂತರ ಯಾವುದೇ ವಿಮಾನ ಹಾರಾಟದ ಮಾರ್ಗವನ್ನು ಬದಲಾಯಿಸಲಾಗಿಲ್ಲ ಅಥವಾ ರನ್‌ವೇಯನ್ನು ಸ್ಥಗಿತಗೊಳಿಸಲಾಗಿಲ್ಲ ಮತ್ತು ವಿಮಾನ ನಿಲ್ದಾಣ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಿತು.

ಈ ಕುರಿತು ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ವಕ್ತಾರರು, ಶಾರ್ಜಾ-ಕೊಚ್ಚಿ ವಿಮಾನವು ತುರ್ತು ಭೂಸ್ಪರ್ಶ ಮಾಡಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಮಾನದ ಪೈಲಟ್ ಹೈಡ್ರಾಲಿಕ್ ಒತ್ತಡ ವ್ಯವಸ್ಥೆಯಲ್ಲಿ ವ್ಯತ್ಯಯ ಗಮನಿಸಿದ ನಂತರ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ವಾಯು ಸಂಚಾರ ನಿಯಂತ್ರಕರಿಗೆ ಮಾಹಿತಿ ರವಾನಿಸಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಲೇಷ್ಯಾದಿಂದ ಕಳ್ಳಸಾಗಣೆ ಮಾಡಿದ 10 ಟನ್ ಗಸಗಸೆ ಬೀಜ ವಶ

Similar News