ಶರಣ್ ಪಂಪ್‌ವೆಲ್ ಹೇಳಿಕೆ ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗೆ ಎಸೆದ ಸವಾಲು: ಕರ್ನಾಟಕ ಮುಸ್ಲಿಂ ಜಮಾಅತ್

Update: 2023-01-30 11:57 GMT

ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ತುಮಕೂರಿನಲ್ಲಿ ನಡೆದ ಶೌರ್ಯ ಯಾತ್ರೆ ಕಾರ್ಯಕ್ರಮದಲ್ಲಿ ಮಾಡಿದ ಭಾಷಣವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗೆ ಎಸೆದ ಸವಾಲಾಗಿದೆ. ಹಾಗಾಗಿ ತಕ್ಷಣ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಒತ್ತಾಯಿಸಿದೆ.

ನಾವು ಅಧಿಕಾರದಲ್ಲಿದ್ದೇವೆ. ನಾವೇನು ಹೇಳಿದರೂ ಕಾನೂನು ವ್ಯವಸ್ಥೆ ನಮ್ಮನ್ನು ಕೇಳುವುದಿಲ್ಲ ಎಂಬ ಭಾವನೆಯಿಂದ ಇಂತಹ ಹೇಳಿಕೆಯನ್ನು ನೀಡಲಾಗುತ್ತಿದೆ. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ಫಾಝಿಲ್ ಕೊಲೆಯನ್ನು ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ ಎಂದು ಬಹಿರಂಗವಾಗಿ ಹೇಳಿರುವುದನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದೆ.

ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಾಝಿಲ್ ಕುಟುಂಬವು ಆರೋಪಿಸಿತ್ತು. ಶರಣ್ ಪಂಪ್‌ವೆಲ್ ಮಾಡಿದ ಭಾಷಣವು ಈ ಅನುಮಾನವನ್ನು ಹೆಚ್ಚಿಸಿವೆ. ಹಾಗಾಗಿ ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು, ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಸಮಿತಿ ಒತ್ತಾಯಿಸಿದೆ.

Similar News