ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸುವ ವಿಚಾರ: ಡಾ. ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚನೆ

Update: 2023-01-30 13:50 GMT

ಬೆಂಗಳೂರು,ಜ.30: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ನೀಡುವಂತೆ ಡಾ.ಮೋಹನ್ ಆಳ್ವ ನೇತೃತ್ವದ ಸಮಿತಿಗೆ ರಾಜ್ಯ ಸರಕಾರ ಸೂಚನೆ ನೀಡಿದೆ.

ಕೇಶವ ಬಂಗೇರಾ, ಡಾ. ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪ್ರಥ್ವಿ ಕವತರ್ ಮಣಿಪಾಲ, ವಸಂತ್ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವಾ ಹಾಗ್ತೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನು ಈ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ತುಳು ಭಾಷೆಗೂ ಅಧಿಕೃತ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹಲವು ಸಂಘ-ಸಂಸ್ಥೆಗಳು, ಸಾರ್ವಜನಿಕರಿಂದ ಸರಕಾರಕ್ಕೆ ಸರಕಾರಕ್ಕೆ ಮನವಿ ಸಲ್ಲಿಕೆಯಾಗಿತ್ತು. ಅಲ್ಲದೆ ಹಲವು ಬಾರಿ ಟ್ವಿಟರ್ ಅಭಿಯಾನವನ್ನು ನಡೆಸಲಾಗಿತ್ತು. ಹಾಗಾಗಿ ಹಾಲಿ ಇರುವ ನಿಯಮ ಮತ್ತು ಕಾನೂನಿನ ಚೌಕಟ್ಟಿನಲ್ಲಿ ತಜ್ಞರ ಸಮಿತಿ ರಚಿಸಿ ವಾಸ್ತವಾಂಶ ವರದಿಯನ್ನು ಸೂಕ್ತ ಶಿಪಾರಸ್ಸಿನೊಂದಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು.

ಅದರಂತೆ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ವಾರದೊಳಗೆ ವರದಿ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಆದೇಶಿಸಿದ್ದಾರೆ.

''ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ'' 

- ಸುನಿಲ್ ಕುಮಾರ್, ಇಂಧನ ಮತ್ತು ಸಂಸ್ಕೃತಿ ಇಲಾಖೆ ಸಚಿವರು 

Similar News