13 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2023-01-30 13:27 GMT

ಬೆಂಗಳೂರು, ಜ.30: ರಾಜ್ಯ ಸರಕಾರವು 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರಿನ ವೈರ್‍ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರನ್ನು ರಾಮನಗರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ನಗರ ಉತ್ತರ ವಿಭಾಗದ ಡಿಸಿಪಿ ಪಾಟೀಲ್ ವಿನಾಯಕ್ ವಸಂತರಾವ್ ಅವರನ್ನು ಸಹಾಯಕ ಪೊಲೀಸ್ ಮಹಾ ನಿರೀಕ್ಷಕ(ಎಐಜಿಪಿ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಸಂತೋಷ್ ಬಾಬು ಅವರನ್ನು ಗುಪ್ತಚರ ವಿಭಾಗದ ವರಿಷ್ಠಾಧಿಕಾರಿಯನ್ನಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಿ.ದೇವರಾಜ ಅವರನ್ನು ಬೆಂಗಳೂರು ಉತ್ತರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಿ.ಆರ್.ಸಿರಿ ಗೌರಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರನ್ನು ಕೆಪಿಟಿಸಿಎಲ್‍ನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಮೈಸೂರಿನ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾಗಿದ್ದ ಶೇಖರ್ ಎಚ್.ಟೆಕ್ಕಣ್ಣವರ್ ಅವರನ್ನು ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ, ಸಹಾಯಕ ಪೊಲೀಸ್ ಮಹಾ ನಿರೀಕ್ಷಕ(ಎಐಜಿಪಿ)ರಾಗಿದ್ದ ಪದ್ಮಿನಿ ಸಾಹೂ ಅವರನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಪ್ರದೀಪ್ ಗುಂಟಿ ಅವರನ್ನು ಕಾರಾಗೃಹಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಎಂ.ಎಸ್.ಗೀತಾ ಅವರನ್ನು ಮೈಸೂರಿನ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ಕಮಾಂಡ್ ಸೆಂಟರ್ ನ ಡಿಸಿಪಿ ಕೆ.ರಾಮರಾಜನ್ ಅವರನ್ನು ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ರವೀಂದ್ರ ಕಾಶಿನಾಥ್ ಗಡಾದಿ ಅವರನ್ನು ಬೆಂಗಳೂರು ನಗರದ ಕಮಾಂಡ್ ಸೆಂಟರ್‍ನ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Similar News