ಫೆ.6ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

Update: 2023-01-30 15:59 GMT

ಬೆಂಗಳೂರು, ಜ.30: ಪ್ರಧಾನಿ ನರೇಂದ್ರ ಮೋದಿ ಫೆ.6ರಂದು ಬೆಂಗಳೂರು ಹಾಗೂ ತುಮಕೂರು ಜಿಲ್ಲೆಯಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ನೈಸ್ ರಸ್ತೆ ಜಂಕ್ಷನ್ ಮಾದಾವರ ಬಳಿಯಿರುವ ಬೆಂಗಳೂರು ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಅಂದು ಬೆಳಗ್ಗೆ ‘ಇಂಡಿಯಾ ಎನರ್ಜಿ ವೀಕ್’ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅನಂತರ, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದೇರಹಳ್ಳಿ ಕಾವಲ್‍ನಲ್ಲಿ ಎಚ್.ಎ.ಎಲ್‍ನ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಬಳಿಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲೂಕುಗಳಿಗೆ ನೀರು ಸರಬರಾಜು ಮಾಡುವ ಜಲ ಜೀವನ್ ಮಿಷನ್ ಯೋಜನೆಗೆ ಅದೇ ಸ್ಥಳದಲ್ಲಿ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.

Similar News