ಅತಿಥಿ ಉಪನ್ಯಾಸಕರ ಸೇವೆಯನ್ನು ಮೊಟಕುಗೊಳಿಸಿದ ಕಾಲೇಜು ಶಿಕ್ಷಣ ಇಲಾಖೆ

Update: 2023-01-30 16:38 GMT

ಬೆಂಗಳೂರು, ಜ.30: ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-22ನೆ ಶೈಕ್ಷಣಿಕ ಸಾಲಿಗೆ ನೇಮಕಗೊಂಡು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕವ ಸೇವೆಯನ್ನು 28ರವರೆಗೆ ವಿಸ್ತರಿಸಿ, ಜ.30ರಂದು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ. 

ಈ ಹಿಂದೆ ಜ.31ರವರೆಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸುವಂತೆ ಸೂಚಿಸಲಾಗಿತ್ತು. ಜ.3ರಂದು 2022-23ನೆ ಸಾಲಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಪ್ರಕಟಣೆ ಹೊರಡಿಸಿದ್ದು, ಆನ್‍ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ. 

ಅತಿಥಿ ಉಪನ್ಯಾಸಕ ಹುದ್ದಗೆ ಅರ್ಜಿ ಸಲ್ಲಿಸಿದವರ ಅಂತಿಮ ಮೆರಿಟ್ ಪಟ್ಟಿಯನ್ನು ಫೆ.3ರಂದು ಇಲಾಖೆಯ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು. ಫೆ.4ರಿಂದ ಫೆ.8ರವರೆಗೆ ಆನ್‍ಲೈನ್ ಕೌನ್ಸಿಲಿಂಗ್ ಅನ್ನು ನಡೆಸಲಾಗುತ್ತದೆ. ಫೆ.9ರಂದು ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಫೆ.10ರಂದು ಆಯ್ಕೆಯಾದ ಅತಿಥಿ ಉಪನ್ಯಾಸಕರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅನುಮತಿ ನೀಡಲಾಗುವುದು ಎಂದು ತಿಳಿಸಿದೆ. 

Similar News