ಸಂಸತ್ ನಲ್ಲಿ ಅದಾನಿ ವಿವಾದದ ಬಗ್ಗೆ ಚರ್ಚೆಗೆ ಸರ್ವಪಕ್ಷ ಸಭೆಯಲ್ಲಿ ಆಗ್ರಹ

Update: 2023-01-30 17:02 GMT

ಹೊಸದಿಲ್ಲಿ, ಜ. 30: ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ನಿಯಮಗಳಿಗೆ ಒಳಪಟ್ಟು ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಸರಕಾರ ಸೋಮವಾರ ಹೇಳಿದೆ ಹಾಗೂ ಕಲಾಪಗಳನ್ನು ಸುಗಮವಾಗಿ ನಡೆಸಲು ಸಹಕಾರ ನೀಡುವಂತೆ ಪ್ರತಿಪಕ್ಷಗಳಿಗೆ ಅದು ಮನವಿ ಮಾಡಿದೆ.

ಬಜೆಟ್ ಅಧಿವೇಶನವು ಮಂಗಳವಾರ ಆರಂಭಗೊಳ್ಳಲಿದೆ.

ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸರಕಾರ ಏರ್ಪಡಿಸಿದ ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ನಿಯಮಗಳಿಗೆ ಒಳಪಟ್ಟು ಪ್ರತಿಯೊಂದು ವಿಷಯದ ಬಗ್ಗೆ ಚರ್ಚೆ ನಡೆಸಲು ಸರಕಾರ ಸಿದ್ಧವಿದೆ ಎಂದರು.

ಸಭೆಯಲ್ಲಿ, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಆರ್ಜೆಡಿಯ ಮನೋಜ್ ಝಾ, ಡಿಎಮ್‌ ಕೆ, ಎಡಪಕ್ಷಗಳು ಮತ್ತು ಇತರ ಪಕ್ಷಗಳ ಪ್ರತಿನಿಧಿಗಳು ಅದಾನಿ ಗುಂಪಿನ ಕಂಪೆನಿಗಳು ಶೇರು ಮಾರುಕಟ್ಟೆಯಲ್ಲಿ ನಡೆಸುತ್ತಿವೆ ಎನ್ನಲಾದ ಅಕ್ರಮ ಚಟುವಟಿಕೆಗಳ ಬಗ್ಗೆ ಮಾತನಾಡಿದರು. ಈ ವಿಷಯದ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಬೇಕೆಂದು ಕೋರಿದರು.

Similar News