×
Ad

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ಗೆ ಕಾರು ಡಿಕ್ಕಿ; ನಾಲ್ವರು ಮೃತ್ಯು

Update: 2023-01-31 10:19 IST

ಮುಂಬೈ: ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ ಮಂಗಳವಾರ ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಕಾರು ಗುಜರಾತ್ ಕಡೆಗೆ ಹೊರಟಿತ್ತು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬೆಳಗಿನ ಜಾವ 3.30ರ ಸುಮಾರಿಗೆ ಕಾರು ಚರೋಟಿಯ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಕಾರಿನಲ್ಲಿದ್ದವರೆಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಲಿಯಾದವರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷ ಚರೋಟಿ ಹಾಗೂ  ಸುತ್ತಮುತ್ತಲಿನ ಪ್ರದೇಶದಲ್ಲಿ ಇದು ಎರಡನೇ ಅಪಘಾತವಾಗಿದೆ. ಜನವರಿ 8 ರಂದು ಮಹಾಲಕ್ಷ್ಮಿ ದೇವಸ್ಥಾನದ ಬಳಿ ಕಂಟೈನರ್ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಒಂದು ಶಿಶು ಸೇರಿದಂತೆ ನಲಸೋಪರ ಕುಟುಂಬದ ಮೂವರು ಸಾವನ್ನಪ್ಪಿದ್ದರು.

ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಕಳೆದ ವರ್ಷ ಸೆಪ್ಟೆಂಬರ್ 4 ರಂದು ಚರೋಟಿ ಬಳಿಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು.

Similar News