ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2023-01-31 12:09 GMT

ಬೆಂಗಳೂರು, ಜ.31: ರಾಜ್ಯ ಸರಕಾರವು ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಮೈಸೂರಿನ ಆಡಳಿತ ತರಬೇತಿ ಸಮಸ್ಥೆಯ ಜಂಟಿ ನಿರ್ದೇಶಕಿ ಎಸ್.ಪೂವಿತಾ ಅವರನ್ನು ಚಾಮರಾಜನಗರ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಚಾಮರಾಜನಗರ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಅವರನ್ನು ಮೈಸೂರು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಮೈಸೂರು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣೀಮಾ ಅವರನ್ನು ಹಾಸನ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಬಳ್ಳಾರಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಿಂಗಮೂರ್ತಿ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಸದಸ್ಯ ಬಿ.ಸದಾಶಿವ ಪ್ರಭು ಅವರನ್ನು ವಿಜಯನಗರ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಉಪ ಆಯುಕ್ತ ರಾಹುಲ್ ಶರಣಪ್ಪ ಸಂಕನೂರ್ ಅವರನ್ನು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Similar News