×
Ad

ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ

Update: 2023-01-31 20:11 IST

ಬೆಂಗಳೂರು, ಜ.31: ಇ-ಖಾತಾ ಅಪ್‍ಲೋಡ್ ಮಾಡಲು 5 ಸಾವಿರ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪ ಪ್ರಕರಣ ಸಂಬಂಧ ಬಿಬಿಎಂಪಿ ಕಂದಾಯ ಅಧಿಕಾರಿ(ಆರ್‍ಐ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಲ್ಲಿನ ಸಂಜಯ್ ನಗರದ ಆರ್‍ಐ ವಸಂತ್‍ಕುಮಾರ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬಿಬಿಎಂಪಿ ವಾರ್ಡ್ ಸಂಖ್ಯೆ 19ರಲ್ಲಿ ಸಂಜಯನಗರ ನಿವಾಸಿಯೊಬ್ಬರು ಇ-ಖಾತಾಗೆ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಸಂಜಯ್ ಅವರು 5000 ರೂಪಾಯಿ ಪಡೆಯುತ್ತಿದ್ದಾಗ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣ ಭೇದಿಸಿದ್ದಾರೆ.

Similar News