ಉಡುಪಿ: ವಿದೇಶಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಅಭಿಯಾನ

Update: 2023-02-01 14:51 GMT

ಉಡುಪಿ: ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ವತಿಯಿಂದ ಜಾರಿಗೊಳಿಸುತ್ತಿರುವ ಅಂತಾರಾಷ್ಟ್ರೀಯ ವಲಸೆ ಕೇಂದ್ರ -ಕರ್ನಾಟಕ(ಐಎಂಸಿ-ಕೆ) ಯೋಜನೆಯಡಿ ಪ್ರಾರಂಭಿಸಲಾದ ವಲಸೆ ಮಾಹಿತಿ ಕೇಂದ್ರಗಳ ಮೂಲಕ ಸಾಗರೋತ್ತರ ನೇಮಕಾತಿಗಾಗಿ ಸಂವಹನ ಚಟಿವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ವಿದೇಶಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡುವ ವೃತ್ತಿ ಗಳಾದ ಗೃಹ ಕಾರ್ಮಿಕರು, ಕಟ್ಟಡ ನಿರ್ಮಾಣ ಕೆಲಸಗಾರರು, ದಾದಿಯರು, ಮತ್ತು ಇತರೆ ವರ್ಗಗಳ ಮೇಲೆ ಕೇಂದ್ರೀಕರಿಸಲಾಗಿದೆ. 

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2 ದಿನಗಳ ಮಾಹಿತಿ, ಶಿಕ್ಷಣ ಮತ್ತು ಸಂವಹನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ 9ರಂದು ಬೆಳಗ್ಗೆ 11ಗಂಟೆಗೆ  ಸಂಬಂಧಪಟ್ಟ ಎಲ್ಲಾ ಭಾಗೀದಾರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ ಗಳೊಂದಿಗೆ ನಡೆಯುವ ಪೂರ್ವಭಾವಿ ಚರ್ಚೆ ಸಭೆಯಲ್ಲಿ ಐಎಂಸಿ-ಕೆ ಅಧಿಕಾರಿಗಳು ಭಾಗವಹಿಸಿ ಯೋಜನೆಯ ಕುರಿತು ಮಾಹಿತಿ ನೀಡಲಿದ್ದಾರೆ.

ಫೆ.10ರಂದು ಬೆಳಗ್ಗೆ 10:30ಕ್ಕೆ ವಿದೇಶದಲ್ಲಿ ಉದ್ಯೋಗ ಮಾಡಲು ಆಸಕ್ತರಿರುವ ಉದ್ಯೋಗಕಾಂಕ್ಷಿ ಅಭ್ಯರ್ಥಿಗಳ ಜೊತೆ ಸಂವಾದ ಶಿಬಿರವನ್ನು ನಗರದ ಮಿಷನ್ ಕಂಪೌಂಡ್‌ನ ಬಡಗುಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗುವುದು.

ದೇಶದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾ ಕಾಂಕ್ಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News