ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆಗೆ ನಿಗದಿಪಡಿಸಿರುವ ಹಣ ಸ್ಪಷ್ಟಪಡಿಸಿಲ್ಲ: ಸಿದ್ದರಾಮಯ್ಯ

Update: 2023-02-01 16:05 GMT

ಬೆಂಗಳೂರು, ಫೆ.1: ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ಕೇಂದ್ರ ಬಜೆಟ್‍ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ 23,000 ಕೋಟಿ ಅವಶ್ಯಕತೆಯಿದೆ. ಕೇಂದ್ರ ಸರಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಹಣದಲ್ಲಿ 40 ಪರ್ಸೆಂಟ್ ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು 3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವುದನ್ನೂ ಸ್ಪಷ್ಟಪಡಿಸಿಲ್ಲ ಎಂದು ಅವರು ಟೀಕಿಸಿದ್ದಾರೆ.

ಬಹಳ ಮುಖ್ಯವಾಗಿ ಕೃಷ್ಣಾ  ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ‘ಬಿ’ ಸ್ಕೀಮ್ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ. ಕೃಷ್ಣಾ  ಮೇಲ್ದಂಡೆ, ಮಹಾದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

Similar News