ಮಂಗಳೂರು | ಗಾಂಜಾ ಸೇವನೆ, ಮಾರಾಟ ಪ್ರಕರಣ: ವೈದ್ಯರು, ವೈದ್ಯ ವಿದ್ಯಾರ್ಥಿಗಳಿಗೆ ಜಾಮೀನು

Update: 2023-02-02 05:06 GMT

ಮಂಗಳೂರು, ಫೆ.2: ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರು ಮತ್ತು ವಿದ್ಯಾರ್ಥಿಗಳ ಸಹಿತ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ (38) ಹೊರತುಪಡಿಸಿ ಉಳಿದ 23 ಮಂದಿಗೂ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

ಈ ಹಿಂದೆ 13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಸೋಮವಾರ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Similar News