ಬಿ.ಸಿ.ರೋಡ್ | ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಬೆಂಕಿ ಆಕಸ್ಮಿಕ

Update: 2023-02-02 05:33 GMT

ಬಂಟ್ವಾಳ, ಫೆ.2: ಇಲೆಕ್ಟ್ರಾನಿಕ್ಸ್ ಮಳಿಗೆಯ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಮೀಪ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿರುವ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕೊಠಡಿಯಲ್ಲಿ ಇಲೆಕ್ಟ್ರಾನಿಕ್ಸ್ ಸಾಮಗ್ರಿಗಳ ಜೊತೆಗೆ ಬ್ಯಾಟರಿ ಚಾಲಿತ ಸ್ಕೂಟರ್ ಗಳನ್ನೂ ದಾಸ್ತಾನಿರಿಸಲಾಗಿತ್ತೆನ್ನಲಾಗಿದೆ. ಸ್ಕೂಟರ್ ನ ಬ್ಯಾಟರಿ ಸ್ಫೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಸಾರ್ವಜನಿಕರು ಸಹಕರಿಸಿದರು. ಬಂಟ್ವಾಳ ನಗರ

ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Similar News