ರಾಜ್ಯದಲ್ಲಿ ಕೆಲವೆಡೆ ಅಕಾಲಿಕ ಮಳೆ ಸಾಧ್ಯತೆ

Update: 2023-02-02 14:11 GMT

ಬೆಂಗಳೂರು, ಫೆ.2: ಚಳಿಗಾಲ ಮುಗಿಯುವ ಮುನ್ನವೇ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬಂಗಾಳ ಕೊಲ್ಲಿಯಲ್ಲಿ ಅಲ್ಪ ಪ್ರಮಾಣದ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿದ್ದು, ಇದರಿಂದಾಗಿ ತಮಿಳುನಾಡಿನ ಬಹುತೇಕ ಕಡೆ ಮಳೆಯಾಗಲಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ. 

ಇದನ್ನೂ ಓದಿತಮಿಳುನಾಡಿನಲ್ಲಿ ಅಕಾಲಿಕ ಮಳೆ: ಹಲವೆಡೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಶುಕ್ರವಾರ ಇಲ್ಲವೇ ಶನಿವಾರ ತುಂತುರು ಇಲ್ಲವೇ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಲಾಗಿದೆ.   

Similar News