ಉಳ್ಳಾಲ ಕಡಲ ಕಿನಾರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

Update: 2023-02-02 15:14 GMT

ಮಂಗಳೂರು: ಉಳ್ಳಾಲದ ಕಡಲ ಕಿನಾರೆಯಲ್ಲಿ ಸುಮಾರು 60ರಿಂದ 70 ವರ್ಷ ಪ್ರಾಯದ ಅಪರಿಚಿತ ಮಹಿಳೆಯೊಬ್ಬರ ಶವ ಗುರುವಾರ ಪತ್ತೆಯಾಗಿದೆ.

ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿ ಸಮುದ್ರದಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರಿದ್ದಲ್ಲಿ ಸಂಪರ್ಕಿಸಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉಳ್ಳಾಲ ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ: ಮೀನುಗಾರರ ರಕ್ಷಣೆ

Similar News