PSI ಹಗರಣ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2023-02-02 16:31 GMT

ಬೆಂಗಳೂರು, ಫೆ.2: ಪಿಎಸ್ಸೈ  ನೇಮಕಾತಿ ಹಗರಣದ ಹಿನ್ನೆಲೆಯಲ್ಲಿ ಈವರೆಗೂ ದಾಖಲಾಗಿರುವ ಎಫ್‍ಐಆರ್ ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನೋಟಿಸ್ ಜಾರಿ ಮಾಡಿದೆ. 

ನಾಲ್ಕು ವಾರಗಳ ಬಳಿಕ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲು ಆದೇಶಿಸಿದೆ. ಪ್ರಕರಣವು ಹಿಂದಿನ ಬಾರಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿರುವ ವಿಭಾಗೀಯ ಪೀಠದ ಮುಂದೆ ಪಟ್ಟಿಯಾದಾಗ ಅರ್ಜಿ ವಿಚಾರಣೆಯಿಂದ ಪೀಠವು ಹಿಂದೆ ಸರಿದಿತ್ತು. ಕ್ಷಮಿಸಿ, ಈ ಪೀಠದ ಮುಂದೆ ಬೇಡ. ನಾವಿಬ್ಬರೂ ಇಲ್ಲದಿರುವ ಪೀಠದ ಮುಂದೆ ಅರ್ಜಿ ಪಟ್ಟಿಮಾಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.
 

Similar News